ಅಮಿತ್ ಷಾ ರವರನ್ನು ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಸೌ. ಶಶಿಕಲಾ ಅ. ಜೊಲ್ಲೆ ರವರು ಭೇಟಿಯಾದರು.

ಭಾರತೀಯ ಜನತಾ ಪಕ್ಷದ ಗೌರವಾನ್ವಿತ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಷಾ ರವರನ್ನು ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಸೌ. ಶಶಿಕಲಾ ಅ. ಜೊಲ್ಲೆ ರವರು ಭೇಟಿಯಾಗಿ, ಅವರ ಆಶೀರ್ವಾದ ಪಡೆದುಕೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ಪಡೆದರು.

ಈ ಸಂದರ್ಭದಲ್ಲಿ ಭಾಜಪಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಭೂಪೇಂದ್ರ ಯಾದವ್ ಹಾಗೂ ಚಿಕ್ಕೋಡಿ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ರವರು ಉಪಸ್ಥಿತರಿದ್ದರು.