ಜಮ್ಮು-ಕಾಶ್ಮೀರಕ್ಕೆ ಹೆಚ್ಚುವರಿಯಾಗಿ 8,000 ಸಿಆರ್‌ಪಿಎಫ್ ಪಡೆ ನಿಯೋಜನೆ

ನವದೆಹಲಿ : ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ ನರೇಂದ್ರ ಮೋದಿ ಸರ್ಕಾರ ತೆಗೆದುಕೊಂಡ ಐತಿಹಾಸಿಕ ಕ್ರಮದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುವರಿ 8,000 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಪಡೆಗಳನ್ನು ನಿಯೋಜಿಸಲಾಗಿದೆ.

ದೇಶದ ವಿವಿಧ ಭಾಗಗಳಿಂದ ಯೊಧರನ್ನು ಭಾರತೀಯ ವಾಯುಪಡೆಯ ಬೋಯಿಂಗ್ ಸಿ -17 ಗ್ಲೋಬ್‌ಮಾಸ್ಟರ್ III ಮೂಲಕ ವಿಮಾನದಲ್ಲಿ ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಕಾಶ್ಮೀರ ಕಣಿವೆಯಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವ ನಿಟ್ಟಿನಲ್ಲಿ ಸೇನಾ ವಾಹನಗಳು ಕೆಲವು ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿವೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.