ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ

ಭುವನೇಶ್ವರ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಜುಂಪಾ ದೇಬ್ನಾಥ್ ಮೃತ ವಿದ್ಯಾರ್ಥಿನಿ. ಈಕೆ ಮೂಲತಃ ಕೋಲ್ಕತ್ತಾದವಳಾಗಿದ್ದು, ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ.

ಮೃತ ವಿದ್ಯಾರ್ಥಿನಿಯ ಸ್ನೇಹಿತ ರಾಹುಲ್ ಸಿಂಗ್ ತನ್ನ ಫೋನ್‍ಗೆ ಉತ್ತರಿಸದ ಕಾರಣ ಆಕೆಯ ಹಾಸ್ಟೆಲ್ ಹೊರಗೆ ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡುತ್ತಿದ್ದಾಗ ಹಾಸ್ಟೆಲ್ ಮಾಲೀಕ ಬಂದು ವಿಚಾರಿಸಿದ್ದು, ನಂತರ ವಿದ್ಯಾರ್ಥಿನಿಯ ರೂಮಿಗೆ ಹೋಗಿದ್ದಾರೆ. ಅಷ್ಟರಲ್ಲಿ ದುಪ್ಪಟ್ಟದಿಂದ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.

ನಾವು ಅವರ ಕುಟುಂಬದವರಿಗೆ ಮಾಹಿತಿ ನೀಡಿದ್ದೇವೆ. ಸದ್ಯಕ್ಕೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ವಿದ್ಯಾರ್ಥಿನಿಯ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.