ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕಾರ್ಯಕ್ರಮವನ್ನು ಜೇವರ್ಗಿ ತಾಲೂಕಿನ ಚನ್ನೂರು ದತ್ತು ಗ್ರಾಮದ ಆದರ್ಶ ಮಹಾವಿದ್ಯಾಲಯ ದಲ್ಲಿ ಏರ್ಪಡಿಸಲಾಗಿತ್ತು.

ಪೂಜ್ಯ ಶ್ರೀ ಗಂಗಾದರೇಶ್ವರ ಗ್ರಾಮೀಣ ಅಭಿವೃದ್ಧಿ ವಿದ್ಯಾವರ್ಧಕ ಸಂಘ (ರಿ)
ಶ್ರೀ ಮಹಾಲಕ್ಷ್ಮಿ ಮಹಿಳಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಜೇವರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕೊನೆಯ ಆರನೇ ದಿನದ ಕಾರ್ಯಕ್ರಮವನ್ನು ವೈಜ್ಞಾನಿಕ ಚಿಂತನೆಗಳ ಯುವಜನತೆಯ ಶಿಬಿರದ ಧ್ಯೇಯದ ಅಡಿಯಲ್ಲಿ ಜೇವರ್ಗಿ ತಾಲ್ಲೂಕಿನ ಚೆನ್ನೂರು ದತ್ತು ಗ್ರಾಮದ ಆದರ್ಶ ಮಹಾವಿದ್ಯಾಲಯದಲ್ಲಿ
ಎನ್. ಎಸ್. ಎಸ್ ವಿಶೇಷ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ರಾಷ್ಟ್ರೀಯ ಯೋಜನಾ ಶಿಬಿರದ
ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಶಿವಕುಮಾರ ದೇವರು ಗುರುಮಠ ಕರ್ಕಿಹಳ್ಳಿ, ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ತಾಲೂಕಿನ ಕಾಂಗ್ರೆಸ್ ನ ಹಿರಿಯ ಮುಖಂಡರಾದ ರಾಜಶೇಖರ್ ಸಿರಿ, ಕಾರ್ಯದರ್ಶಿಗಳಾದ ಶಿವಶರಣಪ್ಪ ಹಿಪ್ಪರಗಿ, ಶ್ರೀ ಮಹಾಲಕ್ಷ್ಮಿ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ//. ಧರ್ಮಣ್ಣ ಬಡಿಗೇರ್ , ಸೇರಿ ಶ್ರೀ ಮಹಾಲಕ್ಷ್ಮಿ ಮಹಿಳಾ ಪದವಿ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೃತ್ಯ ಎಲ್ಲರ ಕಣ್ಮನ ಸೆಳೆಯಿತು.

ವರದಿಗಾರರು;- ಸುರೇಶ್ ಹಿರೇಮಠ್ ಚೆನ್ನಮ್ಮ ಟಿ.ವಿ ಜೇವರ್ಗಿ.