ಶಶಿಕಲಾ ಅ. ಜೊಲ್ಲೆ ರವರು ದಿಢೀರನೆ ಭೇಟಿ ನೀಡಿ ಮಹಿಳಾ ಪೂರಕ ಪೌಷ್ಟಿಕ ಆಹಾರ ತರಬೇತಿ ಹಾಗೂ ತಯಾರಿಕೆ ಕೇಂದ್ರದ ಪರಿಶೀಲನೆ ನಡೆಸಿದರು.

ಬೆಂಗಳೂರು

ದೇಶದಲ್ಲಿಯೇ ಮಾದರಿಯಾಗಿರುವ ಬೆಂಗಳೂರು ಉತ್ತರದ ಎಂ.ಎಸ್.ಪಿ.ಸಿ ಕೇಂದ್ರಕ್ಕೆ (ಮಹಿಳಾ ಪೂರಕ ಪೌಷ್ಟಿಕ ಆಹಾರ ತರಬೇತಿ ಹಾಗೂ ತಯಾರಿಕೆ ಕೇಂದ್ರ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಸೌ. ಶಶಿಕಲಾ ಅ. ಜೊಲ್ಲೆ ರವರು ದಿಢೀರನೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ‌ಗಳು, ಕೇಂದ್ರದ ಕಾರ್ಯವೈಖರಿ ಹಾಗೂ ಆಹಾರ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು.

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಡಿಜಿಟಲೀಕರಣ ಗೊಳಿಸಿ, ಮಕ್ಕಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು.

ಗುಣಮಟ್ಟ ಹೆಚ್ಚಿಸಲು ರಾಜ್ಯದ ಎಲ್ಲಾ ಎಂ.ಎಸ್.ಪಿ.ಸಿ ಕೇಂದ್ರಗಳನ್ನು ಹೊಸ ತಂತ್ರಜ್ಞಾನ ಅಳವಡಿಕೆಯೊಂದಿಗೆ ಆಧುನಿಕರಣಗೊಳಿಸಲಾಗುವುದು ಎಂದು ಹೇಳಿದರು.