ಹೆತ್ತವರನ್ನು ನಿರ್ಲಕ್ಷಿಸಿದರೆ ಹುಷಾರ್‌: ಕಾನೂನಿನ ಹೊಸ ತಿದ್ದುಪಡಿಗಳು ಏನೇನು ಗೊತ್ತಾ ?

ಹೊಸದಿಲ್ಲಿ: ವಯಸ್ಸಾದ ಹೆತ್ತವರನ್ನು ನಿರ್ಲಕ್ಷಿಸುವ ಶೋಷಿಸುವ ಮಕ್ಕಳ ವಿರುದ್ಧ ಕ್ರಮ ಕೈಗೊಳ್ಳಲು ಈಗಿರುವ ಕಾನೂನನ್ನು ಬಲಗೊಳಿಸಿ ಹೊಸ ಕರಡನ್ನು ರೂಪಿಸಲಾಗಿದೆ. ಈ ನಡುವೆ, ಇದನ್ನು ಇನ್ನಷ್ಟು ಬಲಗೊಳಿಸುವ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿಖುದ್ದು ಪ್ರಧಾನಿ ಕಚೇರಿಯೇ ಮಧ್ಯಪ್ರವೇಶಿಸಿದೆ. ಹಾಲಿ ಇರುವ ಕಾನೂನಿನ ಪರಿಣಾಮಕಾರಿತ್ವದ ಬಗ್ಗೆ ಮೂರನೇ ಸಂಸ್ಥೆಯಿಂದ ಪಹೊಸದಿಲ್ಲಿ: ವಯಸ್ಸಾದ ಹೆತ್ತವರನ್ನು ನಿರ್ಲಕ್ಷಿಸುವ ಶೋಷಿಸುವ ಮಕ್ಕಳ ವಿರುದ್ಧ ಕ್ರಮ ಕೈಗೊಳ್ಳಲು ಈಗಿರುವ ಕಾನೂನನ್ನು ಬಲಗೊಳಿಸಿ ಹೊಸ ಕರಡನ್ನು ರೂಪಿಸಲಾಗಿದೆ. ಈ ನಡುವೆ, ಇದನ್ನು ಇನ್ನಷ್ಟು ಬಲಗೊಳಿಸುವ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿಖುದ್ದು ಪ್ರಧಾನಿ ಕಚೇರಿಯೇ ಮಧ್ಯಪ್ರವೇಶಿಸಿದೆ. ಹಾಲಿ ಇರುವ ಕಾನೂನಿನ ಪರಿಣಾಮಕಾರಿತ್ವದ ಬಗ್ಗೆ ಮೂರನೇ ಸಂಸ್ಥೆಯಿಂದ ಪರಿಶೀಲನೆಗೆ ಪಿಎಂಒ ಸೂಚಿಸುವ ಮೂಲಕ ಅದನ್ನು ಇನ್ನಷ್ಟು ಬಲಗೊಳಿಸುವ ಸೂಚನೆ ನೀಡಿದೆ.ರಿಶೀಲನೆಗೆ ಪಿಎಂಒ ಸೂಚಿಸುವ ಮೂಲಕ ಅದನ್ನು ಇನ್ನಷ್ಟು ಬಲಗೊಳಿಸುವ ಸೂಚನೆ ನೀಡಿದೆ.

ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯಿದೆ, 2007ಕ್ಕೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ತಿದ್ದುಪಡಿಗಳನ್ನು ಮಾಡಿತ್ತು. ಇದರಲ್ಲಿಹಿರಿಯರನ್ನು ಶೋಷಿಸುವವರು, ಉಪೇಕ್ಷಿಸುವವರಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಕಾನೂನನ್ನು ಬಲಗೊಳಿಸಿ ಹಿರಿಯರಿಗೆ ನೆಮ್ಮದಿಯನ್ನು ನೀಡುವುದು ಮೋದಿ ಸರಕಾರದ ಆದ್ಯತೆಗಳಲ್ಲಿಒಂದು ಎನ್ನಲಾಗಿದೆ. ಹೀಗಾಗಿಯೇ, ತಿದ್ದುಪಡಿಗಳನ್ನು ಗಮನಿಸಿದ ಪ್ರಧಾನಿ ಕಚೇರಿ ಅದರ ಕಾರ್ಯಸಾಧುತ್ವ ಮತ್ತು ಬಲವನ್ನು ಹೆಚ್ಚಿಸಲು ಮೂರನೇ ಸಂಸ್ಥೆಯೊಂದರ ಪರಿಶೀಲನೆಗೆ ಒಪ್ಪಿಸಲು ಮುಂದಾಗಿದೆ.

ಹೊಸ ತಿದ್ದುಪಡಿಗಳು ಏನೇನು?

* ಇದುವರೆಗೆ ಹಿರಿಯರನ್ನು ನೋಡಿಕೊಳ್ಳುವ ಮಕ್ಕಳು ಎಂಬ ವ್ಯಾಖ್ಯಾನದಡಿ ಕೇವಲ ಪುತ್ರರು, ಪುತ್ರಿಯರು ಮತ್ತು ಮೊಮ್ಮಕ್ಕಳು ಬರುತ್ತಿದ್ದರು. ಮುಂದೆ ಅದನ್ನು ಮಕ್ಕಳು/ಮಲಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಮತ್ತು ಅಪ್ರಾಪ್ತರಿಗೂ ವಿಸ್ತರಿಸಲಾಗಿದೆ.

* ಇದುವರೆಗೆ ಜೀವನ ನಿರ್ವಹಣೆಗೆ ಗರಿಷ್ಠ ಮೊತ್ತವನ್ನು ತಿಂಗಳಿಗೆ 10,000 ರೂ. ಎಂದು ನಿಗದಿ ಮಾಡಲಾಗಿತ್ತು. ಈಗ ಅದು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಳ್ಳೆಯ ಕೆಲಸದಲ್ಲಿರುವವರು ಹೆಚ್ಚು ಪಾವತಿ ಮಾಡಬೇಕಾಗುತ್ತದೆ.

* ಹಿರಿಯ ನಾಗರಿಕರ ಪಾಲನಾ ಕೇಂದ್ರಗಳು, ಡೇ ಕೇರ್‌ ಸೆಂಟರ್‌ಗಳ ಗುಣಮಟ್ಟ ಹೆಚ್ಚಳವನ್ನು ಕಡ್ಡಾಯಗೊಳಿಸಲಾಗಿದೆ.